ಬೆಳಗಾವಿ: ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮತ್ತು ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿಯ ಮಹಿಳಾ ಮೋರ್ಚಾ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದೆ.
ಕಲುಷಿತ ಸಲೈನ್‌ನಿಂದ ಬಳ್ಳಾರಿಯಲ್ಲಿ ಇದೇ ರೀತಿಯ ಸಾವು ಸಂಭವಿಸಿದೆ. ಅದೆ ರೀತಿ ಈ ವರ್ಷ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 120 ಶಿಶುಗಳು ಮತ್ತು 11 ಮಹಿಳೆಯರು ಸಾವನ್ನಪ್ಪಿದ್ದಾರೆ. ಹಾಗಾಗಿ ಮೃತ ಕುಂದರಗಿ ಗ್ರಾಮದ ಪೂಜಾ ಕಡಕಭಾವಿ ಅವರ ಮನೆಗೆ ತೆರಳಿದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್, ರಾಜ್ಯ ಉಪಾಧ್ಯಕ್ಷೆ ಶಾಂಭವಿ ಅಶ್ವಥಪುರೆ, ಬೆಳಗಾವಿ ಗ್ರಾಮೀಣ ಮಹಿಳಾ ಅಧ್ಯಕ್ಷೆ ಡಾ. ನಯನಾ ಭಸ್ಮೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗೋಕಾಕ ಬಿಜೆಪಿ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪಗೋಳ, ಆನಂದ ಅಪ್ಪುಗೋಳ, ಶಿವಾನಂದ ಟೋಪಗಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
28/12/2024 07:42 pm