ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಭೂತಾನ್ ಭೂತಾನ್ ಜಿಗ್ಮ್ ಖೇಸರ್ ನಮ್ಗೇಲ್ ವಾಂಗ್‌ಚುಕ್ ಅವರು ಭಾಗವಹಿಸಿದ್ದರು.
ಇಂದು ಮಧ್ಯಾಹ್ನದ ವೇಳೆಗೆ ದೆಹಲಿಗೆ ಆಗಮಿಸಿದ ಜಿಗ್ಮ್ ಖೇಸರ್ ಅವರು ನಿಗಮ್‌ಬೋಧ್ ಘಾಟ್ ತಲುಪಿ ಅಲ್ಲಿ ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರ ಜೊತೆ ಸಿಂಗ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಖೇಸರ್ ಅವರು ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.
ಯುಪಿಎ 1 ಮತ್ತು 2 ರ ಅವಧಿಯಲ್ಲಿ ಜಿಗ್ಮ್ ಖೇಸರ್ ಅವರು ಮನಮೋಹನ್ ಸಿಂಗ್ ಅವರೊಂದಿಗೆ ಉತ್ತಮ ರಾಜತಾಂತ್ರಿಕ ಬಾಂಧವ್ಯ ಹೊಂದಿದ್ದರು. ಹಲವು ಸಲ ಭೇಟಿಯಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ರಕ್ಷಣ ಸಚಿವ ರಾಜನಾಥ ಸಿಂಗ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಸಿಂಗ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
PublicNext
28/12/2024 07:49 pm