ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ 262 ಕೋಟಿ ರೂ. ಯೋಜನೆಗೆ ಸಂಪುಟ ಅಸ್ತು- ಸ್ಪೀಕರ್ ಖಾದರ್

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ 262ಕೋಟಿ ರೂ.ಗಳ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ 200 ಕೋಟಿ ರೂ.ನಲ್ಲಿ ಕೋಟೆಪುರ-ಬೋಳಾರದವರೆಗೆ ನೇತ್ರಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಸಜಿಪನಡುವಿನಿಂದ ತುಂಬೆವರೆಗೆ 62 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಸೂಚಿಸಿದೆ. ಇದರಿಂದ ಮಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ‌ ಎಂದರು.

ಸಮುದ್ರ ತೀರದಲ್ಲಿ ಕೇರಳದವರೆಗೆ ಕಾರ್ನಿಶ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ನಗರದ ಮಹಾಕಾಳಿಪಡ್ಪುವಿನಲ್ಲಿ

ರೈಲ್ವೆ ಕೆಳಸೇತುವೆ ಕಾಮಗಾರಿ ನಡೆಯುತ್ತಿದೆ. ಇದು ಸಂಪೂರ್ಣಗೊಂಡಲ್ಲಿ ಪಂಪ್‌ವೆಲ್‌ ಮೂಲಕ ಸಂಚರಿಸುವವರಿಗೆ ಹಾಗೂ ತೊಕ್ಕೊಟ್ಟಿನಿಂದ ಪಂಪ್‌ವೆಲ್‌ ಕಡೆಗೆ ಸಂಚರಿಸುವವರಿಗೆ ಸುಲಭದಲ್ಲಿ ಸಂಚರಿಸಲು ಸಾಧ್ಯವಾಗಲಿದೆ ಎಂದು ಖಾದರ್ ತಿಳಿಸಿದರು.

Edited By : Vinayak Patil
PublicNext

PublicNext

28/12/2024 09:05 pm

Cinque Terre

43.34 K

Cinque Terre

0