ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬೆಳಗಾವಿ ಅಧಿವೇಶನದಲ್ಲಿ 16 ವಿಧೇಯಕ ಪಾಸ್‌- ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: ಬೆಳಗಾವಿಯ 16ನೇ ವಿಧಾನಸಭೆಯ ಐದನೇ ಅಧಿವೇಶನದಲ್ಲಿ ಧನ ವಿನಿಯೋಗ ಸೇರಿದಂತೆ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿ, 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕಗಳನ್ನು ವಾಪಸ್‌ ಪಡೆಯಲಾಗಿದೆ. 8 ದಿನಗಳ ಕಾಲ ನಡೆದ ಅಧಿವೇಶನದಲ್ಲಿ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ 49 ಸದಸ್ಯರು ಭಾಗವಹಿಸಿದ್ದು, 13 ಗಂಟೆ 11 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ ಎಂದರು.

ರಾಜ್ಯದಲ್ಲಿ ಬಾಣಂತಿಯರ ಸಾವು, ಅನುದಾನದ ಕೊರತೆ, ಅಭಿವೃದ್ಧಿ ಬಗ್ಗೆ ನಿಯಮ 60ರಡಿ ನಿಲುವಳಿ ಸೂಚನೆಯಲ್ಲಿ ನಡೆಸಲಾಗಿದೆ. ಒಟ್ಟು 3,004 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾದ 150 ಪ್ರಶ್ನೆಗಳ ಪೈಕಿ 137 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 444 ಗಮನ ಸೆಳೆಯುವ ಸೂಚನೆ ಪೈಕಿ 294 ಸೂಚನೆಗಳಿಗೆ ಉತ್ತರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 5 ಸೂಚನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಖಾದರ್ ವಿವರಿಸಿದರು.

ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣವು ವಿಧಾನ ಪರಿಷತ್‌ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಸ್ಥಳ ಮಹಜರು ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಏನಿದ್ದರೂ ಪರಿಷತ್‌ ಸಭಾಪತಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್‌ ವಿಧಾನಸಭೆಯ ಶಾಸಕರಾಗಿರುವುದರಿಂದ ಅವರ ವಿಚಾರ ನನ್ನ ವ್ಯಾಪ್ತಿಗೆ ಬರುತ್ತದೆ. ಅವರು ಪ್ರಕರಣ ಬಗ್ಗೆ ದೂರು ನೀಡಿದ್ದು, ಅದನ್ನು ಪ್ರಿವಿಲೇಜ್‌ ಕಮಿಟಿಗೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Edited By : Vinayak Patil
PublicNext

PublicNext

28/12/2024 09:33 pm

Cinque Terre

46.64 K

Cinque Terre

0