ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಟೆಂಪೋ ಟ್ರಾವೆಲರ್, ಕಾರು ಅಪಘಾತ- ಪ್ರವಾಸಿ ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಚಿಕ್ಕಮಗಳೂರು ರಾಜ್ಯ ಹೆದ್ದಾರಿಯ ಶಿಡ್ಲೆ ಗ್ರಾಮದ ಬಳಿ ಟೆಂಪೋ ಟ್ರಾವೆಲರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಪ್ರವಾಸಕ್ಕೆಂದು ಬಂದಿದ್ದ ತಮಿಳುನಾಡಿನ ಧರ್ಮಪುರಿ ಮೂಲದ ಭುವನ (65) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೆಂಪೋ ಟ್ರಾವೆಲರ್ ವಾಹನವು ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿತ್ತು. ಕಾರು ಶೃಂಗೇರಿಯಿಂದ ತಮಿಳುನಾಡಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vinayak Patil
PublicNext

PublicNext

28/12/2024 09:57 pm

Cinque Terre

46.76 K

Cinque Terre

0

ಸಂಬಂಧಿತ ಸುದ್ದಿ