ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕಮಿಷನರ್ - ಸನ್ಮಾನಿಸಿ ಅಭಿನಂದಿಸಿದ ಡಾ.ವಿ.ಎಸ್‌ವಿ ಪ್ರಸಾದ್

ಹುಬ್ಬಳ್ಳಿ: ಉತ್ತರ ಕರ್ನಾಟಕದ ಶಬರಿಮಲೈ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿಯ ಶಿರೂರ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಸ್ವರ್ಣ ಗ್ರೂಪ್ ಆಫ್ ಕಂಪನಿಯ ಮಾಲೀಕರು, ಸಮಾಜ ಸೇವಕರಾದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಅವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಶಿರೂರ್ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಡಿಪೂಜೆಗೆ ಆಗಮಿಸಿದ ಪೊಲೀಸ್ ಆಯುಕ್ತರು, ಪೂಜೆಯಲ್ಲಿ ಭಾಗಿಯಾಗಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಜಯರಾಮ ಶೆಟ್ಟಿ, ಪ್ರದೀಪ್ ಶೆಟ್ಟಿ, ನಾಗರಾಜ ಗೌರಿ ಸೇರಿದಂತೆ ಇತರರು ಭಾಗವಹಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

28/12/2024 10:53 pm

Cinque Terre

67.82 K

Cinque Terre

1

ಸಂಬಂಧಿತ ಸುದ್ದಿ