ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರದ ಮುರುಘಮಠದ ಸಮೀಪ ನಡೆದಿದೆ.
ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಇನ್ನು ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೊಡ್ಡಬಳ್ಳಾಪುರ ಮೂಲದ ಅಕ್ಷಯ್ (22), ಶರಣ್ (28) ಎಂಬಾತರೇ ಮೃತಪಟ್ಟಿದ್ದಾರೆ. ಮೃತರು ಕಾರಿನಲ್ಲಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
29/12/2024 09:37 am