ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೊಸ ವರ್ಷದ ಆಚರಣೆಗೆ ಅಲರ್ಟ್ ಆದ ಖಾಕಿ - 600 ಮಾದಕ ವ್ಯಸನಿಗಳಿಗೆ ಕಮಿಷನರ್ ವಾರ್ನಿಂಗ್

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದೆ. ಹೀಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಶಾಂತಿಯುತವಾಗಿ ಹೊಸ ವರ್ಷ ಆಚರಣೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದ 600 ಕ್ಕೂ ಹೆಚ್ಚು ಮಾದಕ ವ್ಯಸನಿಗಳ ಪರೇಡ್ ನಡೆಸಲಾಯಿತು.

ಹಳೇ ಸಿ.ಆರ್ ಮೈದಾನದಲ್ಲಿ ಅವಳಿ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಿ ಪೊಲೀಸರ ಕೈಗೆ ಸಿಕ್ಕಾಕಿಕೊಂಡು ಪ್ರಕರಣ ದಾಖಲಾಗಿರುವ 600 ಜನರನ್ನು ಕರೆ ತಂದು ಈ ಸಾರಿಯ ಹೊಸ ವರ್ಷದ ಆಚರಣೆಯಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡದಂತೆ ಕಮಿಷನರ್ ಎನ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಅವಳಿ ನಗರದಲ್ಲಿ ಡ್ರಗ್ಸ್ ನಿಯಂತ್ರಣ ಮಾಡುವ ಸಲುವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗಿತ್ತು. ಅದೇ ರೀತಿ ಕೂಡ ಮುಂದುವರೆದ ಭಾಗವಾಗಿ 600 ಕ್ಕೂ ಹೆಚ್ಚು ಡ್ರಗ್ಸ್ ಸೇವನೆ ಮಾಡುವ ವ್ಯಸನಿಗಳಿಗೆ ಬುದ್ಧಿ ಹೇಳುವುದರ, ಮತ್ತು ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದ್ರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ನೀಡಲಾಯಿತು.

ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/12/2024 01:33 pm

Cinque Terre

178.52 K

Cinque Terre

6

ಸಂಬಂಧಿತ ಸುದ್ದಿ