ನಾಪೋಕ್ಲು: ಭಾಷೆ ಅಳಿದರೆ ಸಂಸ್ಕೃತಿ ನಾಶವಾಗುತ್ತದೆ. ಭಾಷೆ ಉಳಿದರಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ ಎಂದು ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು.
ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕೊಡವ ಸಮಾಜದ ಬೆಳ್ಳಿಹಬ್ಬ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು .
ಕೊಡವ ಸಂಸ್ಕೃತಿ ಉಳಿಯಲು ಮೊದಲು ಭಾಷೆ ಕಲಿಸುವ ಕೆಲಸ ಆಗಬೇಕು. ಭಾಷೆಯ ಅಭಿವೃದ್ಧಿಯಿಂದಷ್ಟೇ ಕೊಡವ ಸಂಸ್ಕೃತಿ ಮೂಲೆ ಮೂಲೆಯಲ್ಲಿ ಉಳಿಯಬಲ್ಲದು ಎಂದರು. ಕೊಡವರು ಆಸ್ತಿಯನ್ನು ಮಾರಬಾರದು ಹಿರಿಯರು ಮಾಡಿಟ್ಟ ಆಸ್ತಿಯನ್ನು ಜತನದಿಂದ ಕಾಪಾಡಬೇಕು ಎಂದ ಅವರು ಮಕ್ಕಳಿಗೆ ನಮ್ಮ ಸಂಸ್ಕೃತಿ ಪದ್ಧತಿ ಪರಂಪರೆಯ ಜೊತೆಗೆ ಉತ್ತಮ ಶಿಕ್ಷಣವನ್ನು ಕೊಟ್ಟು ವಿದ್ಯಾವಂತರನ್ನಾಗಿ ಮಾಡಬೇಕು ಎಂದ ಅವರು ಕೊಡವ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೊಡವ ಜನಾಂಗ ನಿರ್ವಹಿಸಬೇಕು ಎಂದು ಇತ್ತೀಚಿನ ವಿದ್ಯಮಾನಗಳ ಬಗ್ಗೆ ಬೆಳಕು ಎಲ್ಲಿ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದರು.
Kshetra Samachara
29/12/2024 04:54 pm