ಮುಲ್ಕಿ: ಆಂಗ್ಲ ಮಾದ್ಯಮದ ವ್ಯಾಮೋಹದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ, ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಡಾ ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಪ್ರಾರ್ಥಮಿಕ ಶಾಲೆ ಪ್ರೌಢಶಾಲೆ ಮತ್ತು ನಡುಗೋಡು ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿ ಮಾತನಾಡಿದರು.
ಈ ಸಂದರ್ಭ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಸನ್ಮಾನಿಸಲಾಯಿತು. ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸಹಾಯ ಹಸ್ತ ನಡುಗೋಡು ಹೆಸರಿನಲ್ಲಿ ಯೋಜನೆ ಪ್ರಾರಂಭಿಸಿದ್ದು ಇದರ ಉದ್ಘಾಟನೆಯನ್ನು ಫಲಾನಿಭವಿಗಳಿಗೆ ಅರ್ಥಿಕ ನೆರವು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು. ಯುಗಪುರುಷದ ಭುವನಾಭಿರಾಮಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿ ಅಭಿಲಾಷ್ ಶೆಟ್ಟಿ ಕಟೀಲು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ರೈ, ಕಾರ್ಯದರ್ಶಿ ಮಿಥುನ್ ಆಚಾರ್ಯ ಪ್ರೌಢಶಾಲಾ ಮುಖ್ಯೋಪದ್ಯಾಯನಿ ಶಾಂತಿ ಭಟ್, ಪ್ರಾರ್ಥಮಿಕ ಶಾಲಾ ಮುಖ್ಯ ಶಿಕ್ಷಕಿ ಐರಿನ್ ಡಿಸೋಜ, ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಮಲ್ಲಿಕಾ ಪ್ರಕಾಶ್, ಪ್ರಾರ್ಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಸುಧೀರ್ ಶೆಟ್ಟಿ ವರದಿ ವಾಚಿಸಿದರು. ಶಿಕ್ಷಕ ಪರಮಪ್ರಸಾದ್, ಶಿಕ್ಷಕಿ ಪಯಸ್ವಿನಿ, ಶಿಕ್ಷಕಿ ಮಾಯ ಬಹುಮಾನಿತರ ಪಟ್ಟಿ ವಾಚಿಸಿದರು. ದಾನಿಗಳಾದ ಹರಿಶ್ಚಂದ್ರ ಆಚಾರ್ಯ ಬಹುಮಾನ ವಿತರಿಸಿದರು.
ಹಳೆವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಸ್ವಾಗತಿಸಿ, ತಿಲಕ್ ರಾಜ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಮತ್ತು ಹೇಮಂತ್ ಶೆಟ್ಟಿ ನಿರೂಪಿಸಿದರು.
Kshetra Samachara
29/12/2024 05:24 pm