ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ

ಚಿತ್ರದುರ್ಗ: ಕೆ.ಎಸ್.ಆರ್.ಟಿ.ಸಿ. ನೌಕರರ ಬೇಡಿಕೆಗಳನ್ನು ಈಡೇರಿಸದೆ ರಾಜ್ಯ ಸರ್ಕಾರ ಸತಾಯಿಸುತ್ತಿರುವುದನ್ನು ವಿರೋಧಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಚಿತ್ರದುರ್ಗ ವಿಭಾಗದ ಗೌರವಾಧ್ಯಕ್ಷ ಕಾಂ.ಜಿ.ಸಿ.ಸುರೇಶ್‍ಬಾಬು ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿರುವುದು ಸ್ವಾಗತಾರ್ಹ. ರಾಜ್ಯದ ನಾಲ್ಕು ನಿಗಮಗಳ ಚಾಲಕರು ಹಾಗೂ ನಿರ್ವಾಹಕರ ಶ್ರಮದಿಂದ ಪ್ರಯಾಣಿಕರು ಸುರಕ್ಷಿತವಾಗಿ ಬಸ್‍ಗಳಲ್ಲಿ ಸಂಚರಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ಚರ್ಚಿಸಿ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ಅಲ್ಲಿ ನಮ್ಮ ಮನವಿ ಪತ್ರವನ್ನು ಪಡೆಯಲು ಸಿ.ಎಂ.ಬರಲಿಲ್ಲ. ಅವರ ಬದಲಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಸ್ವೀಕರಿಸಿ ಸಾರಿಗೆ ಸಚಿವರ ಗಮನ ಸೆಳೆಯುವ ಭರವಸೆ ನೀಡಿದರೆ ವಿನಃ ಇದರುವರೆವಿಗೂ ಯಾವುದೂ ಈಡೇರಿಲ್ಲ.

ಪತ್ರಿಕಾಗೋಷ್ಟಿಯಲ್ಲಿ ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಟಿ.ಅಶೋಕ್, ಉಪಾಧ್ಯಕ್ಷ ಟಿ.ಆರ್.ಉಮಾಪತಿ, ಸಂಘಟನಾ ಕಾರ್ಯದರ್ಶಿ ಕಾಂ.ಈ.ಸತ್ಯಮೂರ್ತಿ ಇನ್ನು ಅನೇಕರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

29/12/2024 07:14 pm

Cinque Terre

2.98 K

Cinque Terre

0

ಸಂಬಂಧಿತ ಸುದ್ದಿ