ದುಬೈ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಆಟಗಾರರ ಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆಗೊಳಿಸಿದ್ದು, ಇದರಲ್ಲಿ ಟೀಂ ಇಂಡಿಯಾದ ಯುವ ಬೌಲರ್ ಅರ್ಷದೀಪ್ ಸಿಂಗ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
ಈ ನಾಲ್ವರು ಆಟಗಾರರಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ಜಿಂಬಾಬ್ವೆ ತಂಡದಿಂದ ತಲಾ ಒಬ್ಬೊಬ್ಬ ಆಟಗಾರರು ನಾಮನಿರ್ದೇಶನಗೊಂಡಿದ್ದಾರೆ. ಈ ಎಲ್ಲಾ ಆಟಗಾರರು ಟಿ20 ಕ್ರಿಕೆಟ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ಈ ವರ್ಷ ಸಾಕಷ್ಟು ಸುದ್ದಿ ಮಾಡಿದ್ದಾರೆ.
ಅರ್ಷದೀಪ್ ಸಿಂಗ್ 2024ರಲ್ಲಿ 18 ಟಿ20ಐ ಪಂದ್ಯಗಳಲ್ಲಿ 13.5ರ ಸರಾಸರಿಯಲ್ಲಿ 36 ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್, ಜಿಂಬಾಬ್ವೆಯ ಸಿಕಂದರ್ ರಜಾ ಮತ್ತು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಇತರ ಮೂವರು ಆಟಗಾರರಾಗಿದ್ದಾರೆ.
PublicNext
29/12/2024 09:02 pm