ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕೆಪಿಎಸ್ ಸಿ ಪರೀಕ್ಷೆಯಲ್ಲಿ ಯಡವಟ್ಟು- ಪರೀಕ್ಷೆ ಬಹಿಷ್ಕರಿಸಿ ಹೊರ ನಡೆದ ವಿದ್ಯಾರ್ಥಿಗಳು!

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ನಡೆದ ಕೆಪಿಎಸ್ ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಯಡವಟ್ಟಾಗಿದೆ.

ವಿಜಯಪುರ ಜಿಲ್ಲೆಯ ಒಟ್ಟು 32 ಪರಿಕ್ಷಾ ಕೇಂದ್ರದಲ್ಲಿ 12,741 ವಿದ್ಯಾರ್ಥಿಗಳು ಇಂದು ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಿದ್ದರು.

ಆದರೆ, ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಯಡವಟ್ಟು ಉಂಟಾಯಿತು.

ನಗರದ ಸಿಕ್ಯಾಬ್ ಸಂಸ್ಥೆಯ ಎರಡು ಪರೀಕ್ಷಾ ಕೇಂದ್ರ, ಮರಾಠಾ ವಿದ್ಯಾಲಯ ಪರೀಕ್ಷಾ ಕೇಂದ್ರ ಹಾಗೂ ವಿಕಾಸ ವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು ಉಂಟಾಗಿದೆ. ವಿದ್ಯಾರ್ಥಿಗಳ ಒಎಂಆರ್ ಸೀಟು ಹಾಗೂ ನೋಂದಣಿ ಸಂಖ್ಯೆ ಅದಲು ಬದಲಾಗಿ ವಿದ್ಯಾರ್ಥಿಗಳು ಪರದಾಡುವಂತಾಯಿತು.

ಇದರಿಂದ ಕೆಲ ಪರೀಕ್ಷಾರ್ಥಿಗಳು ಪ್ರತಿಭಟನೆಗೆ ಮುಂದಾದರು. ಸ್ಥಳಕ್ಕೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ಹಾಗೂ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಭೇಟಿ ನೀಡಿ ಪರೀಕ್ಷಾರ್ಥಿಗಳ ಮನ ಒಲಿಸಿ ಪರೀಕ್ಷೆ ಬರೆಯುವಂತೆ ಸೂಚಿಸಿದರು.

ವಿಜಯಪುರ ನಗರದ ವಿಕಾಸ ಪ್ರೌಢಶಾಲೆಯಲ್ಲಿ 240 ಪರೀಕ್ಷಾರ್ಥಿಗಳು ಹಾಜರಾಗಿದ್ದರು. ಆದರೆ, ಇದರಲ್ಲಿ 10ರಿಂದ 15 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯದೇ ಹೊರ ನಡೆದರು. ಈ ಸಂದರ್ಭದಲ್ಲಿ ನಗರದ ವಿಕಾಸ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಕೆಪಿಎಸ್ ಸಿ ಸದಸ್ಯ ಎಂ.ಬಿ. ಹೆಗ್ಗಣ್ಣನವರ ಭೇಟಿ ನೀಡಿ ಪರೀಕ್ಷಾರ್ಥಿಗಳ ಮನ ಒಲಿಕೆಗೆ ಯತ್ನ ನಡೆಸಿದರು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪರೀಕ್ಷಾರ್ಥಿಗಳು, ಮರು ಪರೀಕ್ಷೆ ನಡೆಸಿ ನಮಗೆ ನ್ಯಾಯ ಕೊಡಿಸಿ ಎಂದರು.

ಒಟ್ಟಿನಲ್ಲಿ ಕೆಪಿಎಸ್ ಸಿಯಲ್ಲಿ ಯಡವಟ್ಟುಗಳು, ಹಗರಣಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ನಿಜಕ್ಕೂ ಶೋಚನೀಯ.

-ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್ ವಿಜಯಪುರ

Edited By : Vinayak Patil
PublicNext

PublicNext

29/12/2024 09:48 pm

Cinque Terre

42.9 K

Cinque Terre

0