ಬೆಳಗಾವಿ: ಪಾರ್ಟಿ ಮಾಡಲು ಹೋಗಿದ್ದಾಗ ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ.
ಬೆಳಗಾವಿಯ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ (26) ಸಾವನ್ನಪ್ಪಿದ ಯುವಕ. ಮಹಾಂತೇಶ ಎಲ್‌ಜಿ ಕಂಪನಿಯ ಉದ್ಯೋಗಿಯಾಗಿದ್ದ. ಎಲ್‌ಜಿ ಕಂಪನಿಯ ಬೆಳಗಾವಿ ಶಾಖೆಯ 22 ಜನ ಸಿಬ್ಬಂದಿಯೊಂದಿಗೆ ರೆಸಾರ್ಟ್‌ಗೆ ತೆರಳಿದ್ದ. ಇಂದು ಬೆಳಗ್ಗೆ ಈಜುಕೊಳದಲ್ಲಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಫೆಬ್ರುವರಿ 2025ರಲ್ಲಿ ನಡೆಯಬೇಕಿದ್ದ ಸಹೋದರಿಯ ಮದುವೆಗೆ ಮಹಾಂತೇಶ ಸಿದ್ಧತೆ ಮಾಡಿಕೊಳ್ಳುತ್ತಿದ್ದನಂತೆ. ಆದರೆ ಏಕಾಏಕಿ ಸಂಭವಿಸಿದ ದುರಂತದಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
29/12/2024 10:03 pm