ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾರ್ಕಿಂಗ್ ವಿಚಾರಕ್ಕೆ ವಾಗ್ವಾದ - ಕೋಲು ಹಿಡಿದು ಮನಬಂದಂತೆ ಹಲ್ಲೆ ನಡೆಸಿದ ಯುವಕರು ಅರೆಸ್ಟ್‌

ಲಕ್ನೋ: ವಾಹನ ನಿಲುಗಡೆ ವಿಚಾರವಾಗಿ ನಡೆದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡು ಇಬ್ಬರು ಯುವಕರನ್ನು ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ರೆಸ್ಟೋರೆಂಟ್ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ, ಹಿರಿಯ ಪೊಲೀಸ್ ಅಧಿಕಾರಿ ಅಭಿಷೇಕ್ ಶ್ರೀವಾಸ್ತವ ತನಿಖೆಯನ್ನು ಪ್ರಾರಂಭಿಸಿದರು. ''ತನಿಖೆಯ ವೇಳೆ ಈ ಘಟನೆ ಕವಿನಗರದಲ್ಲಿ ನಡೆದಿರುವುದು ಪತ್ತೆಯಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದೇವೆ. ಅವರ ಹೆಸರು ಆಯುಷ್, ನಿತೀಶ್ ಮತ್ತು ಅಭಿಷೇಕ್. ನಾವು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಮುಂದಿನ ಕ್ರಮಕ್ಕಾಗಿ ಸಾಕ್ಷಿಗಳೊಂದಿಗೆ ಮಾತನಾಡುತ್ತಿದ್ದೇವೆ' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

30/12/2024 07:10 am

Cinque Terre

136.36 K

Cinque Terre

2