ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ : ಜ.6ರಂದು ಜಿಲ್ಲಾ ಮಟ್ಟದ ಪ್ರೌಢ ಶಾಲಾ ಶಿಕ್ಷಕರ ಶೈಕ್ಷಣಿಕ ಸಮಾವೇಶ

ಯಲ್ಲಾಪುರ : ಜ.6ರಂದು ಬೆಳಿಗ್ಗೆ 10 ಗಂಟೆಗೆ ಯಲ್ಲಾಪುರ ಪಟ್ಟಣದ ಕಾರ್ಮಿಕ ಭವನದಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್ ಹೇಳಿದರು.

ಅವರು ಪಟ್ಟಣದ ಹೋಲಿರೋಜರಿ ಪ್ರೌಢ ಶಾಲಾ ಸಭಾಭವನದಲ್ಲಿ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಹಲವು ಸಮಸ್ಯೆಗಳ ಪರಿಹಾರ, ಶೈಕ್ಷಣಿಕ ಗುಣಮಟ್ಟ ಹೆಚ್ಚಳ, ಮೌಲ್ಯಯುತ ಶಿಕ್ಷಣದ ಪುನರುತ್ಥಾನ ಮುಂತಾದವುಗಳ ಧ್ಯೇಯೋದ್ದೇಶಗಳೊಂದಿಗೆ ಹಾಗೂ ಸಂಘಟನಾತ್ಮಕ ದೃಷ್ಟಿಯಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ, ಸಮಾವೇಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಮಂತ್ರಿತರಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೆರಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ, ವಿ.ಪ.ಸದಸ್ಯರಾದ ಎಸ್.ವಿ.ಸಂಕನೂರು, ಶಾಂತಾರಾಮ ಸಿದ್ದಿ, ಕ.ರಾ.ವಿ.ಯೋ.ಉಪಾಧ್ಯಕ್ಷ ಪ್ರಮೋದ ಹೆಗಡೆ, ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಶಶಿಭೂಷಣ ಹೆಗಡೆ ಸಿದ್ದಾಪುರ ಮುಂತಾದವರು ಭಾಗವಹಿಸುವರು. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಮೌಲ್ಯ ಶಿಕ್ಷಣದ ಪುನರುತ್ತಾ ಎಂಬ ವಿಷಯದ ಕುರಿತು ಡಾ.ಡಿ.ಕೆ.ಗಾಂವ್ಕಾರ್ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಜಿ.ಆರ್.ಭಟ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ದೈಮನೆ, ಪ್ರಧಾನ ಕಾರ್ಯದರ್ಶಿ ದಿನೇಶ ನೇತ್ರೇಕರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ ಸಂಘಟನೆಯ ಪ್ರಮುಖರಾದ ಸೋಮು ಮೂಡಣ್ಣವರ್, ಎಂ.ಜೆ.ಭಟ್ಟ, ಜಿ.ಯು.ಹೆಗಡೆ, ರಮೇಶ ಅಂಬಿಗೇರ, ಡಾ.ನವೀನ ಕುಮಾರ ಮುಂತಾದವರು ಇದ್ದರು.

Edited By : PublicNext Desk
PublicNext

PublicNext

30/12/2024 12:26 pm

Cinque Terre

10.64 K

Cinque Terre

0

ಸಂಬಂಧಿತ ಸುದ್ದಿ