ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಟ, ನಿರ್ದೇಶಕ ಉಪೇಂದ್ರ ಕೃಷ್ಣಮಠಕ್ಕೆ ಭೇಟಿ, ಪರ್ಯಾಯ ಪುತ್ತಿಗೆ ಶ್ರೀಗಳಿಂದ ಗೌರವ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು.

ಬಳಿಕ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು. ಕೃಷ್ಣ ಮಠದಲ್ಲಿ ಉಪೇಂದ್ರ ನೋಡಲು ಅವರ ಅಭಿಮಾನಿಗಳು ಮುಗಿಬಿದ್ದರು.

ಕೃಷ್ಣಮಠಕ್ಕೂ ಮುನ್ನ ಸಾಲಿಗ್ರಾಮ ದೇವಸ್ಥಾನಕ್ಕೆ ಉಪೇಂದ್ರ ಭೇಟಿ ನೀಡಿ, ತಮ್ಮ ಕುಲದೇವರಾದ ಶ್ರೀಗುರು ನರಸಿಂಹ ದೇವರಿಗೆ ಪೂಜೆ ಸಲ್ಲಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು.

Edited By : Suman K
PublicNext

PublicNext

30/12/2024 12:32 pm

Cinque Terre

40.96 K

Cinque Terre

1