ವಿಜಯಪುರ: ಅಮಿತ್ ಶಾ ಸಂಸತ್ ನಲ್ಲಿ ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ಖಂಡಿಸಿ ಅಹಿಂದ, ದಲಿತ, ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಕರೆ ನೀಡಿರುವ ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಅಂಗಡಿ, ಮಳಿಗೆಗಳು, ಮಾಲ್‌ಗಳು ಬಾಗಿಲು ತೆರೆದಿಲ್ಲ. ಜನರು ಅಗತ್ಯ ಕೆಲಸಕ್ಕಾಗಿ ಕಾರು, ಬೈಕು, ಆಟೋ ರಿಕ್ಷಾಗಳ ಮೊರೆ ಹೋದರೂ, ಜನ ಸಂಚಾರ ವಿರಳವಾಗಿದ್ದು, ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ.
ನಗರದ ಕೇಂದ್ರ ಬಸ್ ನಿಲ್ದಾಣ, ಮಹಾತ್ಮ ಗಾಂಧಿ ರಸ್ತೆ, ಶಿವಾಜಿ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಗಳು ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿವೆ. ವಿಜಯಪುರದಲ್ಲಿ ಮಾರ್ಗಗಳ ಬದಲಾವಣೆ ಮಾಡಿದ ಜಿಲ್ಲಾ ಪೊಲೀಸ್ ಇಲಾಖೆ ನಗರದ ಒಳಭಾಗಕ್ಕೆ ವಾಹನಗಳ ಪ್ರವೇಶಕ್ಕೂ ನಿಷೇಧ ಹೇರಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರ್ಗಿ, ಹುಬ್ಬಳ್ಳಿ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಗದಗ ಕಡೆಗೆ ಹೋಗುವ ವಾಹನಗಳ ರಸ್ತೆ ಮಾರ್ಗಗಳನ್ನ ಪೊಲೀಸ್ ಇಲಾಖೆ ಬದಲಾವಣೆ ಮಾಡಿ ನಗರದ ಬೈಪಾಸ್ ಮೂಲಕವೇ ಸಂಚರಿಸುವಂತೆ ಮಾರ್ಗಸೂಚಿ ಹೊರಡಿಸಿದ.
ಇನ್ನೂ ದಲಿತ ವಿದ್ಯಾರ್ಥಿ ಪರಿಷತ್ ನಿಂದ ವಿಶೇಷವಾಗಿ ಬಂದ್ ಗೆ ಬೆಂಬಲ ನೀಡಬೇಕೆಂದು ಗುಲಾಬಿ ಹೂಗಳನ್ನ ನೀಡಿ ಮನವಿ ಮಾಡಿಕೊಳ್ಳುವ ಮೂಲಕ ಗಮನ ಸೆಳೆದರು.
Kshetra Samachara
30/12/2024 03:28 pm