ಶ್ರೀನಿವಾಸಪುರ : ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ. ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿದೆ.
ಮೃತ ವ್ಯಕ್ತಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪುನಗೋಡ ಗ್ರಾಮದ ಅನಿಲ್ (22), ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡಪಗೆ ಹೋಗುತ್ತಿದ್ದ ಖಾಸಗಿ ಬಸ್, ಬಸ್ ಪಲ್ಟಿಯಾಗಿ ಬಸ್ ನಲ್ಲಿದ್ದ 17 ಪ್ರಯಾಣಿಕರನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
30/12/2024 03:30 pm