ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ಯ ವಿಭಿನ್ನವಾದ ಟೀಸರ್ ರಿಲೀಸ್ ಆಗಿದ್ದು, 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷವಾಗಿದೆ.
ಕರಾವಳಿ ಕಂಬಳ ಪ್ರಪಂಚದ ಬಗ್ಗೆ ಇರುವ ಸಿನಿಮಾ ಇದಾಗಿದ್ದು ಈ ಮೊದಲು ರಿಲೀಸ್ ಆಗಿರುವ ಟೀಸರ್‌ನಲ್ಲಿ ಒಂದು ಮಗು ಜನಿಸುತ್ತದೆ. ಅದೇ ಸಮಯಕ್ಕೆ ಕೊಟ್ಟಿಗೆಯಲ್ಲಿ ಒಂದು ಕರುವಿನ ಜನನವು ಆಗುತ್ತೆ. ಸದ್ಯ ರಿಲೀಸ್ ಆಗಿರುವ ಟೀಸರ್ ಮುಂದುವರೆದ ಭಾಗ ಎಂಬಂತೆ ಆ ಮಗು ಹುಟ್ಟಿದಾಗಿನಿಂದ ಪ್ರತಿಷ್ಠಿಯ ಕುರ್ಚಿಯನ್ನು ನೋಡುತ್ತಾ ಬೆಳೆದವನು, ಆ ಕುರ್ಚಿಯ ಮೇಲೆ ಎಲ್ಲರ ಕಣ್ಣು ಬಿದ್ದಿರುವುದು ಈ ಟೀಸರ್‌ನಲ್ಲಿ ಗೊತ್ತಾಗುತ್ತಿದೆ. ನಟ ಮಿತ್ರ ಘರ್ಜನೆಯನ್ನು ಟೀಸರ್‌ನಲ್ಲಿ ಕಾಣಬಹುದು.
PublicNext
30/12/2024 03:51 pm