ಪಡುಬಿದ್ರಿ: ಮೀನುಗಾರಿಕೆಗೆ ಸಜ್ಜಾಗಿದ್ದ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸಂಭವಿಸಿದೆ. ನೀರುಪಾಲಾಗಿದ್ದ ಮೂವರ ಪೈಕಿ ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಸಮುದ್ರಪಾಲಾದವರನ್ನು ಚಿರಾಗ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ. ಮೂವರನ್ನು ನೀರಿನಿಂದ ಮೇಲಕ್ಕೆತ್ತಿ ಮಂಗಳೂರಿನ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಓರ್ವ ಬದುಕುಳಿದಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಇವರು ಮೀನುಗಾರಿಕೆ ನಡೆಸಲೆಂದು ಸಮುದ್ರಕ್ಕೆ ಇಳಿದಿದ್ದಾಗ ಈ ಘಟನೆ ಸಂಭವಿಸಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/12/2024 04:13 pm