ಚಿಕ್ಕಮಗಳೂರು : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ನಲ್ಲಿ ಏಜೆಂಟ್ ಮೂಲಕ ಸಾಗರದ ಕಸಾಯಿಖಾನೆಗೆ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ತಿಳಿದು.
ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ವಾಹನವನ್ನು ತಡೆದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ವಾಹನವನ್ನು ವಶಕ್ಕೆ ಪಡೆದು ರಕ್ಷಿಸಿದ ಗೋವುಗಳನ್ನು ಸ್ಥಳೀಯ ಗೋಶಾಲೆಗೆ ಬಿಡಲಾಗಿದೆ.
ಮಲೆನಾಡು ಭಾಗದಲ್ಲಿ ಗೋಕಳ್ಳತನ ಮತ್ತು ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬಿದ್ದಿಲ್ಲ. ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಗೋಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಪೊಲೀಸರ ಕಣ್ಣು ತಪ್ಪಿಸಲು ಗೋಕಳ್ಳರು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಆದರೆ, ಗ್ರಾಮಸ್ಥರು ಹಾಗೂ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹಲವು ಗೋವುಗಳನ್ನ ರಕ್ಷಣೆ ಮಾಡಲಾಗಿದೆ .
PublicNext
30/12/2024 04:25 pm