ಉಡುಪಿ : ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಿರುತ್ತವೆ.
108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಂಪರ್ಕನ್ನು ಹೊಂದಿದೆ.
ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ವಾರದ ರಜೆಯನ್ನು ರದ್ದುಗೊಳಿಸಲಾಗಿದೆ. ಮುಂಜಾಗ್ರತೆಗಾಗಿ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇರಿಸಲಾಗಿದೆ.
ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕ ಮಹಾಬಲ ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮಹಾಬಲ,ಜಿಲ್ಲಾ ವ್ಯವಸ್ಥಾಪಕರು
ಇ.ಮ್.ಆರ್.ಐ. ಮೊಬೈಲ್: 7022099108 ಮತ್ತು
9113264518 ಸಂಪರ್ಕಿಸಬಹುದು.
PublicNext
30/12/2024 07:52 pm