ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿ ೪೮ ರಲ್ಲಿ ಸ್ಕಾರ್ಪಿಯೋ ವಾಹನ ಧಗಧಗನೇ ಹೊತ್ತಿ ಉರಿದ ಘಟನೆ ನಡೆದಿದೆ. ಏಕಾಏಕಿ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹತ್ತಿ ವಾಹನ ಹೊತ್ತಿ ಉರಿದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ನಾಲ್ವರು ಕಾರಿನಿಂದ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಗೋವಾಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿಯೇ ಕಾರ್ ಸುಟ್ಟು ಕರಕಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದರು.
PublicNext
30/12/2024 08:01 pm