ಉಡುಪಿ: ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಟೋಲ್ ಶುಲ್ಕ ವಸೂಲಾತಿ ಹಾಗೂ ಟೋಲ್ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಭೆ ನಡೆಯಿತು.ಮಣಿಪಾಲದ ಜಿಲ್ಲಾಧಿಕಾರಿ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಹಿಸಿದ್ದರು.
ಸಭೆಯಲ್ಲಿ ಕೆಲ ಹೊತ್ತು ಸಮಾಲೋಚನೆ ನಡೆಯಿತು.ಮುಖ್ಯವಾಗಿ ಸಾಸ್ತಾನ ಟೋಲ್ ನಲ್ಲಿ ಶುಲ್ಕ ವಿಚಾರವಾಗಿ ನಾಳೆಯಿಂದ ಪ್ರತಿಭಟನೆ ಆಯೋಜನೆಗೊಂಡಿದ್ದು ಈ ಬಗ್ಗೆಯೂ ಚರತಚೆ ನಡೆಯಿತು. ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
30/12/2024 08:01 pm