ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಹೊಸ ರೂಲ್ಸ್.

ಕಾರವಾರ

ಜಿಲ್ಲೆಯಲ್ಲಿ ಡಿ.31 ರಂದು ನಡೆಯುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವಾಗ ಸಾರ್ವಜನಿಕ ಸ್ಥಳಗಳಲ್ಲಿ ಬೈಕ್ ವೀಲಿಂಗ್ ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನಿಗಧಿತ ಸ್ಥಳದಲ್ಲಿಯೇ ಸಾವ್ಜನಿಕರು ವಾಹನ ನಿಲುಗಡೆ ಮಾಡಬೇಕು. ಮಧ್ಯಪಾನ ಮಾಡಿ ಸಮುದ್ರ ನೀರಿಗೆ, ಜಲಪಾತ ಹಾಗೂ ನದಿಗಳ ನೀರಿನಲ್ಲಿ ಈಜುವಂತಿಲ್ಲ. ಸಂಭ್ರಮಾಚರಣೆಯ ಭರದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡಿದ್ದಲ್ಲಿ ಅಂಥಹವರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಸಂಜೆ 6 ಗಂಟೆಯ ನಂತರ ಕಡಲತಿರಗಳಲ್ಲಿ ಬೋಟಿಂಗ್ ನಡೆಸುವಂತಿಲ್ಲ. ಜಿಲ್ಲೆಯ ಎಲ್ಲಾ ಬಾರ್, ರೆಸ್ಟೋರೆಂಟ್, ಹೋಮ್ ಸ್ಟೇ ಗಳನ್ನು ಅಬಕಾರಿ ಕಾಯ್ದೆಯಲ್ಲಿ ನಿಗಧಿಪಡಿಸಿದ ಸಮಯದ ಒಳಗೆ ಮುಚ್ಚಬೇಕು. ಧ್ವನಿವರ್ಧಕಗಳನ್ನು ಬಳಸುವುದರಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಧ್ವನಿವರ್ಧಕಗಳನ್ನು ಕಡ್ಡಾಯವಾಗಿ ಬಳಸುವಂತಿಲ್ಲ ಎಂದು ಜಿಲ್ಲಾಡಳಿತ ತಳಿಸಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಯಾವುದೇ ರೀತಿಯ ಅನುಚಿತ ವರ್ತನೆಯನ್ನು ತೋರಿಸದೇ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

30/12/2024 08:04 pm

Cinque Terre

3.76 K

Cinque Terre

0