ಧಾರವಾಡ: ಹಿಂದೂ ಕಾರ್ಯಕರ್ತರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳನ್ನು ಗಟ್ಟಿಯಾಗಿ ಎದುರಿಸುವ ಸಲುವಾಗಿ ಶ್ರೀರಾಮ ಸೇನೆ ಪ್ರತಿವರ್ಷ ಒಂದೊಂದು ಜಿಲ್ಲೆಯಲ್ಲಿ ಆಯ್ದ ಶ್ರೀರಾಮ ಸೇನೆ ಕಾರ್ಯಕರ್ತರಿಗೆ ವ್ಯಕ್ತಿತ್ವ ವಿಕಸನ ಹಾಗೂ ಶಾರೀರಿಕ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ.
ಪ್ರಸಕ್ತ ವರ್ಷ ಬಾಗಲಕೋಟೆಯಲ್ಲಿ ಈ ತರಬೇತಿ ನಡೆಯಿತು. ಈ ತರಬೇತಿಯಲ್ಲಿ ರಾಜ್ಯದ 186 ಜನ ಪಾಲ್ಗೊಂಡಿದ್ದರು. ಇವರಿಗೆ ಕರಾಟೆ, ದಂಡ, ಆಪ್ಟಿಕಲ್ಸ್ ಹಾಗೂ ಏರ್ ಗನ್ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ನಡೆಯುವ ದಬ್ಬಾಳಿಕೆ ಹಾಗೂ ಹಲ್ಲೆಯನ್ನು ಸ್ವಯಂ ತಡೆಗಟ್ಟುವ ನಿಟ್ಟಿನಲ್ಲಿ ಈ ತರಬೇತಿ ನಡೆಯುತ್ತದೆ. ಪ್ರತಿವರ್ಷ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಈ ತರಬೇತಿ ನೀಡಲಾಗುತ್ತದೆ. ಇಲ್ಲಿ ತರಬೇತಿ ಪಡೆದುಕೊಂಡವರು ಮುಂದೆ ತಮ್ಮ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಗೆ ತರಬೇತಿ ನೀಡಲಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/12/2024 08:19 pm