ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಅಮಿತ್ ಶಾ ಹೇಳಿಕೆ ಖಂಡಿಸಿ ವಿಜಯಪುರ ಬಂದ್ ಯಶಸ್ವಿ- ಪ್ರತಿಭಟನೆ ಮೆರವಣಿಗೆ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಹಾಗೂ ಪ್ರಗತಿಪರ ಸಂಘಟನೆಗಳು ನೀಡಿದ ಬಂದ್ ಕರೆ ಯಶಸ್ವಿಯಾಯಿತು.

ಹೌದು, ಗುಮ್ಮಟನಗರಿ ವಿಜಯಪುರದಲ್ಲಿ ಇಂದು ಅಹಿಂದ, ದಲಿತ ಸಂಘಟನೆಗಳ ಒಕ್ಕೂಟ, ಕನ್ನಡ ಪರ ಸಂಘಟನೆಗಳು ಸೇರಿದಂತೆ 25ಕ್ಕೂ ಅಧಿಕ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿದ್ದವು. ಜಿಲ್ಲಾಡಳಿತದ ವತಿಯಿಂದ ಬಂದ್ ವೇಳೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರದಲ್ಲಿ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತು. ಜೊತೆಗೆ ಡಿ.29ರ ರಾತ್ರಿಯಿಂದ ಡಿ.30ರ ಮಧ್ಯರಾತ್ರಿವರೆಗೂ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬಸ್ ಸಂಚಾರ ಸಂಪೂರ್ಣವಾಗಿ ಬಂದ್ ಆಗಿರುವ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಎಪಿಎಂಸಿ ಮಾರುಕಟ್ಟೆ, ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆ, ಕೆ.ಸಿ. ಮಾರ್ಕೆಟ್, ತರಕಾರಿ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿತ್ತು.

Edited By : Shivu K
PublicNext

PublicNext

30/12/2024 08:59 pm

Cinque Terre

68.96 K

Cinque Terre

0

ಸಂಬಂಧಿತ ಸುದ್ದಿ