ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು 23 ವರ್ಷದ ತೇಜಸ್ ಸುತಾರೆ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಇದೀಗ 7ಕ್ಕೆ ಏರಿಕೆಯಾಗಿತ್ತು.
ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ 6 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ ಮೃತಪಟ್ಟಿದ್ದಾರೆ.
ಇದೆಲ್ಲಾ ಸಾವಿನ ಮೃದಂಗ ಮಾಸುವ ಮುನ್ನವೇ ಸೋಮವಾರ ರಾತ್ರಿ 8 ಗಂಟೆಗೆ ರಾಮ ನಗರದ ತೇಜಸ್ ಸುತಾರೆ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 7ಕ್ಕೇ ಏರಿಕೆಯಾಗಿದೆ. ಬೆಂಕಿ ದುರಂತದಲ್ಲಿ ಮೃತ ತೇಜಸ್ ದೇಹ 75℅ ಸುಟ್ಟ ಗಾಯಗಳಾಗಿತ್ತು. ಸದ್ಯ ಇನ್ನುಳಿದ 2 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/12/2024 08:59 pm