ಬೆಳಗಾವಿ: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕುಡಿದು ವಾಹನ ಚಲಾವಣೆ, ಗಲಾಟೆ ಮಾಡುವ ಕಿಡಿಗೇಡಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಪ್ರಭಾರ ಎಸ್ಪಿ ಅಮರನಾಥ್ ರೆಡ್ಡಿ ಅವರು ಹೇಳಿದರು.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ವಾಹನಗಳಲ್ಲಿ ಕುಡಿದು ಗಲಾಟೆ ಮಾಡುವುದಾಗಲಿ, ಬೈಕ್ ನಲ್ಲಿ ಮೂರ್ನಾಲ್ಕು ಜನ ತೆರಳುವುದಾಗಲಿ ಮಾಡಬಾರದು ಎಂದರು
ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿರಬೇಕು. ಸ್ವಿಮಿಂಗ್ ಫುಲ್ಸ್ ಇದ್ದರೆ ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲೆಯಾದ್ಯಂತ 5 ಕೆಎಸ್‌ಆರ್‌ಪಿ ತುಕಡಿ, 10 ಡಿಆರ್ ತುಕಡಿ, ಜಿಲ್ಲೆಯಾದ್ಯಂತ 45 ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಯಾವುದೇ ರೀತಿಯ ಅವಘಡ ಜರುಗದಂತೆ ತಡೆಯಲು ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
PublicNext
30/12/2024 09:44 pm