ಬೆಳಗಾವಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ನಡುವೆ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ನಡೆದಿದೆ.
ರಾಮಪ್ಪ ಬಸವಂತಪ್ಪ ಕೌಜಲಗಿ(25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ(24) ಕೊಲೆ ಮಾಡಿದ ಆರೋಪಿಯಾಗಿದ್ದು, ಇವರಿಬ್ಬರು ಸಂಬಂಧಿಕರಾಗಿದ್ದಾರೆ. ಗದ್ದೆಯಲ್ಲಿ ಇಬ್ಬರು ನೀರು ಹಾಯಿಸುವಾಗ ನೀರಿಗಾಗಿ ರಾಮಪ್ಪ ಹಾಗೂ ಅವನ ತಂದೆ ಬಸವಂತಪ್ಪ ಹಾಗೂ ಸಿದ್ದಪ್ಪನ ನಡುವೆ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಸಿದ್ದಪ್ಪ ತನ್ನ ಕೈಯಲ್ಲಿದ್ದ ಕುಡಗೋಲಿನಿಂದ ರಾಮಪ್ಪನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.
ಅದನ್ನು ತಡೆಯಲು ಹೋದ ರಾಮಪ್ಪನ ತಂದೆ ಬಸವಂತಪ್ಪನ ಮೇಲೇಯೂ ಹಲ್ಲೆ ಮಾಡಿರುವ ಬಗ್ಗೆ ಸಿದ್ದಪ್ಪ ಪೊಲೀಸ್ ಅಧಿಕಾರಿಗಳ ಮುಂದೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಬಸವಂತಪ್ಪನನ್ನು ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇನ್ನು ಕೊಲೆ ಮಾಡಿದ ಆರೋಪಿ ಸಿದ್ದಪ್ಪ ಕಳೆದ ನವೆಂಬರ ತಿಂಗಳ 12ರಂದು ಮದುವೆಯಾಗಿದ್ದಾ. ಬಸವಂತಪ್ಪ ತನ್ನ ಒಬ್ಬನೇ ಮಗ ರಾಮಪ್ಪನಿಗೆ ಮದುವೆ ಮಾಡುವ ಕನಸು ಕಂಡಿದ್ದ ಆದರೆ ಆ ಕನಸು ಬತ್ತಿ ಹೋಗಿದೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ದೂದಪೀರ್ ಮುಲ್ಲಾ, ಸಿಪಿಐ ಶ್ರೀಶೈಲ್ ಬ್ಯಾಕೋಡ, ಪಿಎಸ್ಐ ರಾಜು ಪೊಜೇರಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
PublicNext
31/12/2024 10:28 am