ಬೆಂಗಳೂರು : ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಪೊಸ್ಟರ್ ಅಭಿಯಾನ ಆರಂಭಿಸಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿ ಪ್ರೀಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಪೋಸ್ಟರ್ ರನಲ್ಲಿ ಸೂಪಾರಿ ಸ್ಪಾನ್ಸರ್ ಖರ್ಗೆ ಎಂದು ಬರೆಯಲಾಗಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್ ರವಿಕುಮಾರ್ ನೇತೃತ್ವದಲ್ಲಿ ಗೋಡೆಗೆ ಪೋಸ್ಟರ್ ಅಂಟಿಸಿಲಾಗಿದೆ.
ಬಿಜೆಪಿ ಕಾರ್ಯಕರ್ತರು ಗೋಡೆಗೆ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸುತ್ತಿದ್ದ ಹಾಗೇ ಸ್ಥಳಕ್ಕೆ ಬಂದ ಪೊಲೀಸರು ಪೋಸ್ಟರ್ ಗಳನ್ನ ಕಿತ್ತು ಹಾಕಿ ಬಿಜೆಪಿ ಮುಖಂಡ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ .
PublicNext
31/12/2024 11:50 am