ಕೋಲಾರ : ಸಾರ್ವಜನಿಕವಾಗಿ ಕೆಲಸ ಮಾಡುವಾಗ ಎಲ್ಲಾ ಇಲಾಖೆಗಳ ಸಹಕಾರ, ಸಮನ್ವಯತೆ ಅಗತ್ಯ. ಸಹಕಾರ ಸಮನ್ವಯತೆ ಇಲ್ಲದೆ ಕೆಲಸ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ವಿವಿಧ ಇಲಾಖಾ ಅಧಿಕಾರಿಗಳು ಪರಸ್ಪರ ಸಹಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಿ. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ನೂತನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಿ ಮಾತನಾಡಿದರು. ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯದಿಂದ ಕೆಲಸ ಮಾಡಿ ನಂಬಿಕೆ, ವಿಶ್ವಾಸ ಗಳಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಇಲಾಖೆವಾರು ಸಭೆ ಹಾಗೂ ಸಮಸ್ಯೆಗಳ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸುವುದಾಗಿ ತಿಳಿಸಿದರು.
Kshetra Samachara
31/12/2024 11:56 am