ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವಾಸಿಗರಿಂದ ತುಂಬಿ ತುಳುಕುತ್ತಿರುವ ಕಾಫಿನಾಡು ಹೋಮ್ ಸ್ಟೇ, ರೆಸಾರ್ಟ್‌ಗಳು ಸೋಲ್ಡ್ ಔಟ್!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನ್ಯೂ ಇಯರ್ ಸೆಲೆಬ್ರೇಶನ್‌ಗೆ ಸಿದ್ದವಾಗಿದ್ದು ಸಾವಿರಾರು ಪ್ರವಾಸಿಗರು ಕಾಫಿನಾಡಿನ ಹೋಮ್ ಸ್ಟೇ, ರೆಸಾರ್ಟ್‌ಗಳತ್ತ ಮುಖ ಮಾಡಿದ್ದಾರೆ. ಜಿಲ್ಲೆಯಲ್ಲಿರುವ 700 ಹೋಮ್ ಸ್ಟೇಗಳು ಸೇರಿದಂತೆ 30ಕ್ಕೂ ಹೆಚ್ಚಿನ ರೆಸಾರ್ಟ್ ಗಳಲ್ಲಿ ಪ್ರವಾಸಿಗರು ಹೊಸ ವರ್ಷ ಬರ ಮಾಡಿಕೊಳ್ಳಲು ಕಾತರರಾಗಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಮಲೆನಾಡಿನ ಸೌಂದರ್ಯ ಇಮ್ಮಡಿಗೊಂಡಿದೆ. ಹೀಗಾಗಿ ಪ್ರವಾಸಿಗರು 15-20 ದಿನಗಳ ಹಿಂದೆಯೇ ಹೋಮ್ ಸ್ಟೇ, ರೆಸಾರ್ಟ್‌ಗಳನ್ನು ಬುಕ್ ಮಾಡಿ ಬಂದಿದ್ದಾರೆ. ಈಗ ಅಧಿಕ ಹಣ ಪಾವತಿ ಮಾಡಿದ್ರು ರೂಮ್‌ಗಳು ಸಿಗುತ್ತಿಲ್ಲ.

ಹೊಸ ವರ್ಷ ಸಂಭ್ರಮಾಚರಣೆಗೆ ಹೊರ ಜಿಲ್ಲೆ, ರಾಜ್ಯಗಳಿಂದ ಆಗಮಿಸಿರುವ ಅತಿಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹೋಮ್ ಸ್ಟೇ, ರೆಸಾರ್ಟ್ ಮಾಲೀಕರಿಗೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಸೂಚನೆ ನೀಡಿದ್ದಾರೆ.

ಒಟ್ಟಾರೆ ಹೋಮ್ ಸ್ಟೇ, ರೆಸಾರ್ಟ್ ಗಳಲ್ಲಿ ಪ್ರವಾಸಿಗರು ತುಂಬಿ ತುಳುಕುತ್ತಿದ್ದು ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ಬರದಿಂದ ಸಾಗುತ್ತಿವೆ.

Edited By : Suman K
PublicNext

PublicNext

31/12/2024 12:00 pm

Cinque Terre

46.61 K

Cinque Terre

0

ಸಂಬಂಧಿತ ಸುದ್ದಿ