ಬೆಂಗಳೂರು/ಧಾರವಾಡ : ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಸಾಕ್ಷಿ ನಾಶ ಆರೋಪದ ಮೇಲೆ ಬಂಧಿತರಾಗಿ ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದು ಮಾಡುವಂತೆ ಸಿಬಿಐ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.
ಯೋಗೀಶಗೌಡ ಹತ್ಯೆ ಪ್ರಕರಣದ ಎ 1 ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಹೇಳಿದ್ದಾರೆ. ಮುತ್ತಗಿ ಅವರ ಹೇಳಿಕೆಯನ್ನು ನ್ಯಾಯಾಲಯ ದಾಖಲು ಮಾಡಿಕೊಂಡಿದೆ. ಯೋಗೀಶಗೌಡ ಕೊಲೆ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ಮುತ್ತಗಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಮಾಫಿ ಸಾಕ್ಷಿ ದಾಖಲು ಮಾಡದಂತೆ ವಿನಯ್ ಕುಲಕರ್ಣಿ ಶತ ಪ್ರಯತ್ನ ಮಾಡಿದರೂ ಮುತ್ತಗಿ ಮಾತ್ರ ನ್ಯಾಯಾಲಯದ ಮುಂದೆ ಸುದೀರ್ಘ ಮಾಫಿ ಸಾಕ್ಷಿ ನುಡಿದಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಸಿಬಿಐ, ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
Kshetra Samachara
31/12/2024 12:17 pm