ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ಚಿತ್ರದುರ್ಗ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಜಿಲ್ಲಾ ಅಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಸುಮಾರು 50 ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದರು. ನೊಂದಾಯಿತ ಸಂಘಟನೆಗಳಿಗೆ ಕಟ್ಟಡ ಕಾರ್ಮಿಕರನ್ನ ನೊಂದಣಿ ಮಾಡಲು ಆದೇಶ ನೀಡಬೇಕು, ಸೇಸ್ ವಸೂಲಿಗೆ ಪ್ರಾಧಿಕಾರ ರಚನೆ ಮಾಡಬೇಕು, ಈ ಹಿಂದೆ ನೀಡುತ್ತಿದ್ದ ವಿಧ್ಯಾರ್ಥಿ ವೇತನವನ್ನ ಮುಂದುವರೆಸಬೇಕು, ಅಲ್ಲದೇ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸಹಜ ಸಾವಿಗೆ 5 ಲಕ್ಷ ನೀಡಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು.

Edited By : PublicNext Desk
Kshetra Samachara

Kshetra Samachara

31/12/2024 12:44 pm

Cinque Terre

1.86 K

Cinque Terre

0

ಸಂಬಂಧಿತ ಸುದ್ದಿ