ಚಿತ್ರದುರ್ಗ: ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ಅವಮಾನಿಸಿದ ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸರ್ಕಾರದಿಂದ ವಜಾ ಮಾಡಬೇಕೆಂದು ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸರ್ಕಲ್ ಬಳಿ ತಮಟೆ ಬಾರಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಸಂಘಟನೆಯ ಕಾರ್ಯಕರ್ತರು ಗೃಹ ಮಂತ್ರಿ ಅಮಿತ್ ಶಾ ಅವರನ್ನು ಕೇಂದ್ರ ಸರ್ಕಾರದಿಂದ ವಜಾಗೊಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
Kshetra Samachara
31/12/2024 01:05 pm