ಕೋಲಾರ: ಕೋಲಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ, ಪ್ರೋತ್ಸಾಹ ಧನ ಸೇರಿಸಿ ಒಟ್ಟು 15000 ಮಾಸಿಕ ಗೌರವ ಧನ ನಿಗದಿಯಾಗಬೇಕು ಹಾಗೂ ನಗರ ಆಶಾ ಕಾರ್ಯಕರ್ತೆಯ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 20 ಸಾವಿರ ಅಷ್ಟು ಗೌರವ ಧನವನ್ನು ಹೆಚ್ಚಳ ಮಾಡಬೇಕು. ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 5 ಲಕ್ಷಕ್ಕೆ ಹೆಚ್ಚಿಸುವಂತೆ ಹಾಗೂ ರಾಜ್ಯದ್ಯಂತ ಬಾಕಿ ಇರುವ ಎರಡು ಮೂರು ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಮಂಗಳಾರವರಿಗೆ ಮನವಿ ಸಲ್ಲಿಸಿದ್ದಾರು.
Kshetra Samachara
31/12/2024 03:37 pm