ಶಿವಮೊಗ್ಗ : ಶಿವಮೊಗ್ಗ ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ.3460 ದಂಡ ವಿಧಿಸಿದ್ದಾರೆ. ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹಾಗು ಸೇವನೆ ಮಾಡುವವರಿಗೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗು ಕೋಟ್ಪಾ ಕಾಯ್ದೆ ಕುರಿತು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ನಾಗರಾಜ್ ನಾಯಕ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಅರಿವು ಮೂಡಿಸಿದ್ದಾರೆ.
Kshetra Samachara
31/12/2024 04:13 pm