ಚಿತ್ರದುರ್ಗ: ಶಿಕ್ಷಣಕ್ಕಾಗಿ ಸರ್ಕಾರ ಸವಲತ್ತುಗಳನ್ನು ನೀಡುತ್ತಿದೆ. ಎಲ್ಲವನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಗೌರವಾಧ್ಯಕ್ಷ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಕೊಳಗೇರಿ ಪ್ರದೇಶದ ಮಹಿಳೆಯರಿಗೆ ಕರೆ ನೀಡಿದರು.
ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಮಂಗಳವಾರ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊಳಗೇರಿ ನಿವಾಸಿಗಳ ಸಮಾವೇಶ ಹಾಗೂ ಬಡವರಿಗೆ ಹೊದಿಕೆ ವಿತರಣಾ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಚಳಿಗಾಲದಲ್ಲಿ ಬಡವರಿಗೆ ಹೊದಿಕೆ ಅತ್ಯವಶ್ಯಕವಾಗಿ ಬೇಕು. ಕೊಳಗೇರಿ ನಿವಾಸಿಗಳ ಹಾಗೂ ಬಡವರ ಮೂಲಭೂತ ಸೌಲಭ್ಯಕ್ಕಾಗಿ ಗಣೇಶ್ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಕೊಳಗೇರಿಗಳ ಬಗ್ಗೆ ಅಪಾರವಾದ ಕಾಳಜಿಯಿದೆ. ಇಂತಹ ಪುಣ್ಯದ ಕೆಲಸಕ್ಕೆ ದಾನಿಗಳು ಉದಾರ ಮನಸ್ಸಿನಿಂದ ನೆರವು ನೀಡಬೇಕು.
ಬಡತನವೆಂಬ ಕಾರಣಕ್ಕೆ ಚಿಕ್ಕ ಮಕ್ಕಳನ್ನು ದುಡಿಮೆಗೆ ಕಳಿಸುವ ಬದಲು ಶಾಲೆಗೆ ಕಳಿಸಿ ಶಿಕ್ಷಣವಂತರನ್ನಾಗಿಸಿ. ಅಪ್ರಾಪ್ತ ಹೆಣ್ಣು ಮಕ್ಕಳಿಗೆ ವಿವಾಹ ಮಾಡಿದರೆ ತಂದೆ-ತಾಯಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಕೊಳಗೇರಿ ನಿವಾಸಿಗಳನ್ನು ಜಾಗೃತಿಗೊಳಿಸಿದರು.
ಈ ಸಂದರ್ಭದಲ್ಲಿ ಉದ್ಯಮಿ ಸೈಟ್ ಬಾಬಣ್ಣ, ರಾಜು ಟೈರ್ಸ್ ಮಾಲೀಕ ಅಲೆಕ್ಸಾಂಡರ್, ಜಿಲ್ಲಾ ಬಡಗಿ ಕೆಲಸಗಾರರ ಸಂಘದ ಅಧ್ಯಕ್ಷ ಎ.ಜಾಕೀರ್‍ಹುಸೇನ್, ಕಾಂಗ್ರೆಸ್ ಮುಖಂಡ ಹೆಚ್.ಎಸ್.ಖಾನ್, ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಕರುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಜಾನಪದ ಜಾಗೃತಿ ಪರಿಷತ್ ಅಧ್ಯಕ್ಷ ಹೆಚ್.ಪ್ಯಾರೆಜಾನ್ ವೇದಿಕೆಯಲ್ಲಿದ್ದರು.
Kshetra Samachara
31/12/2024 06:02 pm