ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಹೇಳಿದ್ದಾರೆ.
ಸಂದೇಶ್‌ಖಾಲಿಗೆ ಭೇಟಿ ನೀಡಿದ ಸುವೇಂದು ಅಧಿಕಾರಿ ಅವರು, ಸಂದೇಶಖಾಲಿಯಲ್ಲಿ ಪ್ರತಿಭಟನಾ ನಿರತ ಮಹಿಳೆಯರನ್ನು ಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ (2026ರಲ್ಲಿ) ಬಿಜೆಪಿ ಅಧಿಕಾರಕ್ಕೆ ಬಂದರೆ, ಸಂದೇಶಖಾಲಿ ಘಟನೆಗೆ ಸಂಬಂಧಿಸಿದಂತೆ ಆಯೋಗವನ್ನು ರಚಿಸಲಾಗುವುದು. ಸಂದೇಶಖಾಲಿಯಲ್ಲಿ ಪ್ರತಿಭಟನಾನಿರತ ಮಹಿಳೆಯರನ್ನು ಬಂಧಿಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರನ್ನು ಜೈಲಿಗೆ ಹಾಕಲಾಗುತ್ತದೆ ಎಂದು ಅಧಿಕಾರಿ ಹೇಳಿದರು.
ಸಂದೇಶ್‌ಖಾಲಿಯಲ್ಲಿ ಪ್ರತಿಭಟನಾನಿರತ ಮಹಿಳೆಯರ ಮೇಲೆ ತೃಣಮೂಲ ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪಗಳನ್ನು ಹೊರಿಸಿದೆ. ಇದೀಗ ಸಿಎಂ ಬ್ಯಾನರ್ಜಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದು ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.
PublicNext
01/01/2025 08:04 am