ಚಿತ್ರದುರ್ಗದ ಮುರುಘಾ ಮಠದ ಮುಂಭಾಗದ ಐತಿಹಾಸಿಕ ಅರಸನಕೆರೆ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ.
ಸುಮಾರು 38 ಎಕರೆ ವಿಸ್ತೀರ್ಣದಲ್ಲಿರುವ ಕೆರೆಗೆ 4 ಕೋಟಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಕಾರ್ಯ ನಡೆದಿದೆ. ಕೆರೆಯ ಸುತ್ತಲೂ ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ವಾಕಿಂಗ್ ಪಾಥ್, ಅಲಂಕಾರಿಕ ವಿದ್ಯುತ್ ಬೆಳಕಿನ ವ್ಯವಸ್ಥೆ, ಫ್ಲಾವರ್ ಬೆಡ್, ಹಿರಿಯ ನಾಗರಿಕರ ಜಿಮ್ ಸೇರಿದಂತೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಬರುವ ಪ್ರವಾಸಿಗರಿಗೆ ಪಾರ್ಕಿಂಗ್ ನಂತಹ ಅನುಕೂಲತೆಗಳನ್ನು ಮಾಡಲಾಗ್ತಿದೆ.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಡೆದ ಈ ಕಾಮಗಾರಿಯಲ್ಲಿ ಹಂತ ಹಂತವಾಗಿ ಕೆರೆಯನ್ನು ಅಭಿವೃದ್ಧಿಪಡಿಸುವ ಮೂಲಕ ನಗರದ ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್ ಮಾಹಿತಿ ನೀಡಿದ್ದಾರೆ.
PublicNext
01/01/2025 08:10 am