ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ವರ್ಷದ ಮೊದಲ ದಿನವೇ ಗುಡ್ ನ್ಯೂಸ್: ಎಲ್‌ಪಿ‌ಜಿ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೋಟ್ಯಾಂತರ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ನೀಡಿರುವ ತೈಲ ಕಂಪನಿಗಳು ಎಲ್‌ಪಿ‌ಜಿ ದರದಲ್ಲಿ ಭಾರೀ ಇಳಿಕೆಯನ್ನು ಘೋಷಿಸಿವೆ.

ಹೌದು. ಪ್ರತಿ ಎಲ್​​ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲನೇ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಶೀಲಿಸಿ ಹೊಸ ಬೆಲೆ ಪ್ರಕಟಿಸುತ್ತವೆ.

ಹೊಸ ವರ್ಷದಂದು ತಮ್ಮ ಗ್ರಾಹಕರಿಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿವೆ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದೆ. ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ. ಚೆನ್ನೈನಲ್ಲಿ ಇವತ್ತಿನಿಂದ 19 ಕೆಜಿ ಸಿಲಿಂಡರ್​ಗೆ 1966 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.

Edited By : Vijay Kumar
PublicNext

PublicNext

01/01/2025 08:29 am

Cinque Terre

59.67 K

Cinque Terre

9