ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಬೋನಿಗೆ ಬಿದ್ದ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿಮೀರಿ ಹೋಗಿದೆ ಮೂಡಿಗೆರೆ, ಎನ್.ಆರ್ ಪುರ ಭಾಗಗಳಲ್ಲಿ ಕಾಡಾನೆ, ಕಾಡುಕೋಣಗಳ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಇತ್ತ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದು ಜನರ ನಿದ್ದೆಗೆಡಿಸಿತ್ತು. ಕತ್ತಲಾಗುತ್ತಿದಂತೆಯೇ ಜನರು ಮನೆಯಿಂದ ಹೂರಬರಲು ಹಿಂದೇಟು ಹಾಕುತ್ತಿದ್ದರು. ಚಿರತೆಯನ್ನು ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದರು.

ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ನಿನ್ನೆ ರಾತ್ರಿ ಚಿರತೆ ಬಿದ್ದಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದ್ಧ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೋನಿಗೆ ಬಿದಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು. ಕೊನೆಗೂ ಚಿರತೆ ಬೋನಿಗೆ ಬಿತ್ತು ಎಂದು ಜನ ನಿಟ್ಟುಸಿರು ಬಿಟ್ಟಿದ್ದಾರೆ.

Edited By : Manjunath H D
PublicNext

PublicNext

01/01/2025 08:32 am

Cinque Terre

56.66 K

Cinque Terre

0

ಸಂಬಂಧಿತ ಸುದ್ದಿ