ಮಣಿಪಾಲ: ಉಡುಪಿಯ ಮಣಿಪಾಲದಲ್ಲಿ ವಿದ್ಯಾರ್ಥಿಗಳೇ ಹೆಚ್ಚಿರುವುದರಿಂದ ಹೊಸ ವರ್ಷಾಚರಣೆ ಕಳೆಗಟ್ಟಿತ್ತು. ಪಬ್‌ಗಳಲ್ಲಿ ಯುವಜನತೆಯೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಪೊಲೀಸರು ತಡರಾತ್ರಿ ತಪಾಸಣೆ ಕೈಗೊಂಡಿದ್ದರು. ಈ ಪ್ರದೇಶದಲ್ಲಿ ವಿದ್ಯಾರ್ಥಿಗಳ ಅಬ್ಬರ ಜೋರಾಗಿತ್ತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಡರಾತ್ರಿವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವುದು ಕಂಡುಬಂತು. ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಇನ್ನೊಂದೆಡೆ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಕೈಗೊಂಡರು. ಹನ್ನೆರಡೂವರೆ ಬಳಿಕ ವಿದ್ಯಾರ್ಥಿ ಗಳನ್ನು ತಮ್ಮ ಹಾಸ್ಟೆಲ್‌ಗಳಿಗೆ ತೆರಳುವಂತೆ ಪೊಲೀಸರು ಸೂಚಿಸಿದರು.
ಇನ್ನು ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿ ಸಂಜೆ ವೇಳೆ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು. ಉಡುಪಿ ನಗರ ಸೇರಿದಂತೆ ಕೆಲವು ಕಡೆಗಳಲ್ಲಿ ಹೊಸ ವರ್ಷದ ಆಚರಣೆ ನಡೆಯಿತು. ಹೊಟೇಲ್, ರೆಸಾರ್ಟ್ ಹಾಗೂ ಅಪಾರ್ಟ್‌ಮೆಂಟ್ ಗಳಲ್ಲಿ ಸಂಗೀತ ಕಾರ್ಯಕ್ರಮ ಸಹಿತ ವಿವಿಧ ಸಾಂಸ್ಕೃತಿಕ ವಿನೋದಾವಳಿಗೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಇನ್ನು ಕೆಲವೆಡೆ ಕೇಕ್ ಕತ್ತರಿಸಿ ಸಂಭ್ರಮಿಸುವುದು ಕಂಡುಬಂತು.
PublicNext
01/01/2025 10:28 am