ಹುಬ್ಬಳ್ಳಿ: ಹುಬ್ಬಳ್ಳಿಯ ಘೋಡಕೆ ಪ್ಲಾಟ್‌ನಲ್ಲಿ ಚಾಕು ಇರಿತಕೊಳ್ಳಗಾಗಿದ್ದ ತಂದೆ ಹಾಗೂ ಮಗನ ಪೈಕಿ ಮಗ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಈಗಷ್ಟೇ ಮೃತಪಟ್ಟಿದ್ದಾನೆ.
ಮನೆಯ ಅಕ್ಕ ಪಕ್ಕದವರ ಜೊತೆ ಮಕ್ಕಳ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ. ನಡೆದ ಪರಿಣಾಮ ಮುಜಾಮೀಲ್ ಎಂಬಾತ ಸಮೀರ್ ಹಾಗೂ ಜಾವೇದ್ ಚಾಕು ಇರಿತಕ್ಕೊಳಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಸಮೀರ್ ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಮೀರ್ ಬುಧವಾರ ಬೆಳಗ್ಗೆ ಎಂಟು ಗಂಟೆಗೆ ಸಾವನ್ನಪ್ಪಿದ್ದಾನೆ. ಚಾಕು ಇರಿದ ಮುಜಾಮೀಲ್ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು ಆತನಿಗೂ ಕೂಡಾ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ವಿನಯ ರೆಡ್ಡಿ, ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/01/2025 11:13 am