ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.
ಸರ್ಕಲ್ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ. ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೇ ತಿಳಿದು ಬರಬೇಕಿದೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.
PublicNext
01/01/2025 12:23 pm