ಉಡುಪಿ: ಮುಂಬೈಯಿಂದ ಎರ್ನಾಕುಲಂಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಬುಧವಾರ ಸಂಭವಿಸಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರು.ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು ಅರಿತು ಕೃತಕ ಉಸಿರಾಟದ ವ್ಯವಸ್ಥೆಗೊಳಿಸಿದ್ದರು.
ರೈಲ್ವೇ ವೈದ್ಯಾಧಿಕಾರಿ ಡಾ. ಸ್ಟಿವನ್ ಜಾರ್ಜ್ ಅವರು ಇಂದ್ರಾಳಿ ರೈಲು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜ ಸೇವಕ ನಿತ್ಯಾನಂದ ಸಹಕಾರದೊಂದಿಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಗೊಳಿಸಿದರು. ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದನ್ನು ದೃಢಪಡಿಸಿದರು.
PublicNext
01/01/2025 12:46 pm