ಬೆಂಗಳೂರು : ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಬಿಜೆಪಿ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ. ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.
PublicNext
01/01/2025 02:33 pm