ಬೆಳಗಾವಿ : ಕಾಂಗ್ರೆಸ್ ಕಚೇರಿಯಲ್ಲಿ ಇದ್ದು ಪಕ್ಷಕ್ಕೆ ಹೆಚ್ಚು ಸಮಯ ಕೊಡಬೇಕು. ಇದೇ ಮಾನದಂಡದ ಇಟ್ಟುಕೊಂಡು ಸಾಮಾನ್ಯ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುವುದು. ಜಿಲ್ಲಾಧ್ಯಕ್ಷರ ನೇಮಕ ಮಾಡುವ ಕುರಿತು ಪಕ್ಷಾತೀತವಾಗಿ ಒಬ್ಬರ ಹೆಸರನ್ನು ಪ್ರಸ್ತಾವನೆಗೆ ಕಳುಹಿಸಲಾಗಿದೆ. ಅಲ್ಲದೆ, ಚಿಕ್ಕೋಡಿ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ಅಧಿಕಾರ ಎಐಸಿಸಿಗೆ ಮಾತ್ರ ಇದೆ. ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿರಬಾರದು ಎನ್ನುವುದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬೇಕು ಎಂದರು.
ಬೆಳಗಾವಿ ಜಿಲ್ಲೆಯ ವಿಭಜನೆ ಮಾಡುವ ವಿಷಯ ಬಜೆಟ್ ನಲ್ಲಿ ಇಲ್ಲ. ಹೊಸ ಜಿಲ್ಲೆಯಾಗಬೇಕು ಎಂಬ ಬೇಡಿಕೆ ಇದೆ. ಎಲ್ಲ ರೀತಿಯಿಂದ ಒಮ್ಮತ ಬರಬೇಕು ಅಷ್ಟೆ. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆಯಾಗಿದೆ. ಬರುವ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುವುದು. ರಾಜ್ಯದಲ್ಲಿ ಮಳೆಯಿಂದ ಸಾಕಷ್ಟು ಸೇತುವೆಗಳು ಹಾಳಾಗಿವೆ. ಬಜೆಟ್ ನಲ್ಲಿ ವಿಶೇಷವಾಗಿ ಸೇತುವೆ ನಿರ್ಮಾಣಕ್ಕೆ ಅನುದಾನ ಕೇಳುತ್ತೇವೆ ಎಂದರು.
ಬಿಜೆಪಿಯವರು ಸರಕಾರದ ಮೇಲೆ ಭ್ರಷ್ಟಾಚಾರ ಆರೋಪದ ಕುರಿತು ಉತ್ತರಿಸಿದ ಅವರು, ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರಿಗೆ ಕೇವಲ ಆರೋಪ ಮಾಡುವುದರ ಕೆಲಸವಾಗಿದೆ. ನಿಗಮ ಮಂಡಳಿ ನೇಮಕ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಇದೆ. ಈಗಾಗಲೇ 70% ಆಗಿದೆ. 30% ಇದೆ. ನಮ್ಮ ಮೇಲೆ ಜವಾಬ್ದಾರಿ ಇರುವುದು ನಿರ್ದೇಶಕರ ನೇಮಕ ಮಾಡುವುದು. ಗೃಹ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಕಮಿಟಿ ಇದೆ. ಹಂತ ಹಂತವಾಗಿ ನೇಮಕ ಮಾಡಲಾಗುವುದು ಎಂದರು.
PublicNext
01/01/2025 04:01 pm